Donate

Help us to help others, please Donate

Related Links

e-Procurement Process 2015

Tender Application Form

Related Links

ಶಿವಗಂಗಾ ವಿವಾಹ ಮಹೋತ್ಸವ ಸಂಪನ್ನ

ಗುರುವಾರ, ಅಕ್ತೂಬರ 19th, 2017 -

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಶಿವಗಂಗಾ ವಿವಾಹೋತ್ಸವವು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಆಶ್ವೀಜ ಬಹುಳ ಚತುರ್ದಶಿ ದಿನ ವೈಭವದಿಂದ ಜರುಗಿತು .
ಶ್ರೀ ಕ್ಷೇತ್ರ ಗೋಕರ್ಣದ ವಿಶಾಲವಾದ ಮಹಾಬಲೇಶ್ವರ ಕಡಲ ತೀರದಲ್ಲಿ ಸೂರ್ಯ ಪಶ್ಚಿಮಾ೦ಬುಧಿಗೆ ತೆರಳುತ್ತಿರುವ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಜನರ ಸಮ್ಮುಖದಲ್ಲಿ ನಿಶ್ಚಯಿತ ವಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು.
ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ಭಕ್ತರು ಆರತಿ ನೀಡಿ ದೇವದಂಪತಿಗಳನ್ನು ಬರಮಾಡಿಕೊಂಡರು .

ವಿವಾಹ ಮಹೋತ್ಸವದ ನಂತರ ಶಿವ -ಗಂಗೆಯರು ಶ್ರೀ ದೇವಾಲಯದ ‘ಅಮೃತಾನ್ನ’ ಭೋಜನ ಶಾಲೆಗೆ ಚಿತ್ತೈಸಿ ಸುಂದರವಾಗಿ ಶೃಂಗಾರಗೊಂಡ ಮಂಟಪದಲ್ಲಿ ದೇವರಾಜೋಪಚಾರ ಪೂಜೆ ಸ್ವೀಕರಿಸಿದರು. ಆನಂತರ ಪ್ರಸಾದ ವಿತರಣೆ ನಡೆಯಿತು . ಉಪಾಧಿವಂತ ಮಂಡಲದ ಸದಸ್ಯರು, ಊರ ನಾಗರಿಕರು, ಎಲ್ಲ ಸಮಾಜದ ಬಂಧುಗಳು ಉಪಸ್ಥಿತರಿದ್ದರು .

Leave a Reply

Highslide for Wordpress Plugin