

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಕೇಂದ್ರ ರೇಲ್ವೆ ಸಚಿವ ಶ್ರೀ ಸುರೇಶ ಪ್ರಭು , ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ , ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಆರ್ ವಿ ದೇಶಪಾಂಡೆ ಇವರು ಭೇಟಿ ನೀಡಿ ಶ್ರೀ ಆತ್ಮಲಿಂಗಕ್ಕೆ ಅಭಿಷೇಕ, ಪೂಜೆ ನೆರವೇರಿಸಿದರು . ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು . ಉಪಾಧಿವಂತ ಮಂಡಳಿಯ ಅಧ್ಯಕ್ಷ ವೇ ಗಣೇಶ ಭಟ್ ಹಿರೇಗಂಗೆ ಇವರ ನೇತೃತ್ವದಲ್ಲಿ ಉಪಾಧಿವಂತ ಮಂಡಳಿಯ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು.