

Jagadguru Shankaracharya Maha Samsthanam - ShreeSamsthanaGokarna; SriRamachandrapuraMatha
ಪ ಪೂ ಶ್ರೀ ಶ್ರೀ ಬಸವರಾಜ ಸ್ವಾಮಿಗಳು , ಶ್ರೀಹರಿಹರಾತ್ಮಜ ಮಠ , ನಾಗರಬಾವಿ , ಬೆಂಗಳೂರು ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದ ೨೦೦ ನೇ ದಿನದ ಸಾನ್ನಿಧ್ಯವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು. ಮಾಜಿ ಶಾಸಕ ಶ್ರೀ ದಿನಕರ ಶೆಟ್ಟಿ ದಂಪತಿಗಳು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವಿಸಿದರು . ತಾ ಪ೦ ಸದಸ್ಯ ಶ್ರೀ ಮಹೇಶ ಶೆಟ್ಟಿ , ಶ್ರೀ ರಮೇಶ ಪ್ರಸಾದ , ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಪ್ರತಿದಿನ ವಿವಿಧ ಮಠಾಧೀಶರು ಪಾಲ್ಗೊಳ್ಳುವ ‘ಗೋಕರ್ಣ ಗೌರವ’ಕಾರ್ಯಕ್ರಮವು ಶ್ರೀ ಕ್ಷೇತ್ರ ಗೋಕರ್ಣ ಉಪಾಧಿವಂತ ಮಂಡಳದ ಸಹಯೋಗದೊಂದಿಗೆ , ಸಂತಸೇವಕ ಸಮಿತಿಯಸಂಘಟನೆಯಲ್ಲಿ ನಿರಂತರವಾಗಿ ನಡೆಯುತ್ತಿದ್ದು ಇಂದು 200 ದಿನಗಳನ್ನು ಯಶಸ್ವಿಯಾಗಿ ಪೂರೈಸಿತು . ಆಗಮಿಸಿದಎಲ್ಲ ಸಂತರು ತಮ್ಮ ಶಿಷ್ಯ ಜನತೆಯ ಒಳಿತನ್ನು ಹಾಗೂ ಲೋಕಕಲ್ಯಾಣವನ್ನು ಸಂಕಲ್ಪಿಸಿ ಆತ್ಮಲಿಂಗಕ್ಕೆಕ್ಷೀರಾಭಿಷೇಕ, ಪಂಚಾಮೃತ, ನವಧಾನ್ಯ ಅಭಿಷೇಕ, ಬಿಲ್ವಾರ್ಚನೆ ಹಾಗೂ ಸುವರ್ಣ ನಾಗಾಭರಣ ವಿಶೇಷ ಪೂಜೆಸಲ್ಲಿಸಿ ಕಾರ್ಯಕ್ರಮದ ಬಗ್ಗೆ ತಮ್ಮ ಅತಿ ಸಂತಸವನ್ನು ವ್ಯಕ್ತಪಡಿಸಿ ಆಶೀರ್ವದಿಸುತ್ತಿದ್ದಾರೆ. ಪೂಜೆಯ ನಂತರಪ್ರತಿದಿನದ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಎಲ್ಲ ಸಮಾಜದ ಪ್ರಮುಖರಿಂದ ನಡೆಸಿಕೊಂಡು ಬರಲಾಗಿದೆ.