Donate

Help us to help others, please Donate

Related Links

ಶಿವಗಂಗಾ ವಿವಾಹೋತ್ಸವ ಸಂಪನ್ನ

ಗುರುವಾರ, ಅಕ್ತೂಬರ 23rd, 2014 -

ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಶಿವಗಂಗಾ ವಿವಾಹೋತ್ಸವವು ಆಶ್ವೀಜ ಬಹುಳ ಚತುರ್ದಶಿ ದಿನ ವೈಭವದಿಂದ ಜರುಗಿತು .
ಗೋಕರ್ಣದ ವಿಶಾಲವಾದ ಮಹಾಬಲೇಶ್ವರ ಕಡಲ ತೀರದಲ್ಲಿ ಸೂರ್ಯ ಪಶ್ಚಿಮಾ೦ಬುಧಿಗೆ ತೆರಳುತ್ತಿರುವ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಜನರ ಸಮ್ಮುಖದಲ್ಲಿ ನಿಶ್ಚಯಿತ ವಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವಿವಾಹವಾದಳು. ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು.
ವಿವಾಹ ಮಹೋತ್ಸವದ ನಂತರ ಶಿವ -ಗಂಗೆಯರು ಶ್ರೀ ದೇವಾಲಯದ ‘ಅಮೃತಾನ್ನ’ ಭೋಜನ ಶಾಲೆಗೆ ಚಿತ್ತೈಸಿ ಸುಂದರವಾಗಿ ಶೃಂಗಾರಗೊಂಡ ಮಂಟಪದಲ್ಲಿ ದೇವರಾಜೋಪಚಾರ ಪೂಜೆ ಸ್ವೀಕರಿಸಿದರು. ಆನಂತರ ಪ್ರಸಾದ ವಿತರಣೆ ನಡೆಯಿತು . ಉಪಾಧಿವಂತ ಮಂಡಲದ ಸದಸ್ಯರು, ಊರ ನಾಗರಿಕರು, ಭಕ್ತಾದಿಗಳು ಉಪಸ್ಥಿತರಿದ್ದರು .

Leave a Reply

Highslide for Wordpress Plugin