As per the holy directions of Sri Sri Raghaveshwara Bharathi Mahaswamiji, Shree Ramachandrapuramatha, *Tripurakhya Deepotsava* will be performed on 12-11-2019 Tuesday at Samsthana Shree Mahabaleshwara Temple, Shree Kshetra Gokarna. All are heartily invited.
ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ವಿಕಾರಿ ಸಂವತ್ಸರದ *ತ್ರಿಪುರಾಖ್ಯ ದೀಪೋತ್ಸವ* ನಿಮಿತ್ತ 12-11-2019 ಮಂಗಳವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ನಂತರ ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ನಂತರ ರಾತ್ರಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ ರಥಬೀದಿಯಲ್ಲಿ ರಥೋತ್ಸವ ಜರುಗಲಿದೆ. ತಾವೆಲ್ಲರೂ ಆಗಮಿಸಿ ಪ್ರಸಾದ ಸ್ವೀಕರಿಸಬೇಕಾಗಿ ಆದರದ ಆಮಂತ್ರಣ .